Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:10 - ಕನ್ನಡ ಸತ್ಯವೇದವು J.V. (BSI)

10 ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:10
11 ತಿಳಿವುಗಳ ಹೋಲಿಕೆ  

ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.


ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.


ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಇರಬೇಕು.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.


ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ಅಂಥವನನ್ನು ಶುದ್ಧನಾದ ಮೇಲೂ ಏಳು ದಿವಸ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು