Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:15 - ಕನ್ನಡ ಸತ್ಯವೇದವು J.V. (BSI)

15 ಅದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡುಬುಗಳು ಇವುಗಳನ್ನೂ ಮೇಲೆ ಕಂಡ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ ಒಂದು ಬುಟ್ಟಿ ತುಂಬ ಎಣ್ಣೆಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡಬುಗಳು ಮತ್ತು ಮೇಲೆ ಹೇಳಿದ ಬಲಿಗಳ ಸಮೇತ ಕೊಡಬೇಕಾದ ಧಾನ್ಯದ್ರವ್ಯ-ಪಾನದ್ರವ್ಯಗಳು, ಇವುಗಳನ್ನೆಲ್ಲಾ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:15
15 ತಿಳಿವುಗಳ ಹೋಲಿಕೆ  

ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳಾದರೂ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾದರೂ ಆಗಿರಬೇಕು.


ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹೊಯಿದ ಹುಳಿಯಿಲ್ಲದ ಕಡುಬುಗಳನ್ನೂ ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು.


ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗುವದು.


ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಧಾನ್ಯಪಾನನೈವೇದ್ಯಗಳು ಯೆಹೋವನ ಆಲಯದಲ್ಲಿ ನಿಂತುಹೋಗಿವೆ; ಯೆಹೋವನ ಸೇವಕರಾದ ಯಾಜಕರು ದುಃಖಿಸುತ್ತಾರೆ.


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ ಅದನ್ನು ಉಂಡು ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷೆಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು ಎಂದು ಹೇಳಿದ್ದಾನೆ.


ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಟಗರನ್ನೂ ನೈವೇದ್ಯಕ್ಕಾಗಿ ಎಣ್ಣೆವಿುಶ್ರವಾದ ಪದಾರ್ಥವನ್ನೂ ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು ಅಂದನು.


ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿದನಂತರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು