Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:19 - ಕನ್ನಡ ಸತ್ಯವೇದವು J.V. (BSI)

19 ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಒಂದು ಹುಳಿಯಿಲ್ಲದ ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡನಂತರ ಅವನ ಕೈಯಲ್ಲಿ ಇಟ್ಟು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನು ಬುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು ಹಾಗೂ ಹುಳಿಯಿಲ್ಲದ ಒಂದು ಕಡುಬನ್ನು ತೆಗೆದುಕೊಂಡು ನಾಜೀರ ವ್ರತಸ್ಥನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಇಡಬೇಕು; ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ ‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:19
7 ತಿಳಿವುಗಳ ಹೋಲಿಕೆ  

ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ - ಯಾಜಕನಿಗೋಸ್ಕರ ಕರಿಯತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವದಿಲ್ಲ; ಅವನಿಗೆ ಹಸೀ ಮಾಂಸವೇ ಬೇಕು ಅನ್ನುವನು.


ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದದ್ದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನೂ ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವದಕ್ಕಾಗಿ ತಂದು ಸಮರ್ಪಿಸಬೇಕು.


ಮತ್ತು ಮೋಶೆ ಆರೋನನಿಗೂ ಅವನ ಮಕ್ಕಳಿಗೂ ಹೀಗಂದನು - ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಬೇಯಿಸಿ ಅದನ್ನೂ ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನೂ ಅಲ್ಲೇ ಊಟಮಾಡಬೇಕು.


ಎಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವದಕ್ಕೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು