Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:27 - ಕನ್ನಡ ಸತ್ಯವೇದವು J.V. (BSI)

27 ಹೀಗೆ ಅವರು ಇಸ್ರಾಯೇಲ್ಯರ ಮೇಲೆ ನನ್ನ ಹೆಸರನ್ನು ಉಚ್ಚರಿಸಲಾಗಿ ನಾನು ಅವರನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಛರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಯೆಹೋವನು, “ಹೀಗೆ ಆರೋನನೂ ಅವನ ಪುತ್ರರೂ ಇಸ್ರೇಲರನ್ನು ನನ್ನ ಹೆಸರಿನಿಂದ ಆಶೀರ್ವದಿಸುವುದರಿಂದ ನಾನು ಅವರನ್ನು ಆಶೀರ್ವದಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:27
19 ತಿಳಿವುಗಳ ಹೋಲಿಕೆ  

ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.


ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಆದಕಾರಣ ನಿನ್ನನ್ನು ಮರೆಹೊಕ್ಕವರೆಲ್ಲರು ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಯಾಕೋಬನು - ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು - ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಆತನು ನಮ್ಮನ್ನು ಆಶೀರ್ವದಿಸುವನು. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ಅವರನ್ನು ಆಶೀರ್ವದಿಸುವದಕ್ಕೆ ನನಗೆ ಅಪ್ಪಣೆಯಾಯಿತು; ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು.


ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವದಿರುತ್ತದೆ? ನೀನೇ ಹೋಗಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡು ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ಐಗುಪ್ತ್ಯರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ ರಕ್ಷಿಸಿ ಅದರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


ನಾನು ಯೆಹೋವನು; ಅಬ್ರಹಾಮ ಇಸಾಕ ಯಾಕೋಬರಿಗೆ ನಾನು ಸರ್ವಶಕ್ತನಾದ ದೇವರೆಂಬ ಹೆಸರುಳ್ಳವನಾಗಿ ಕಾಣಿಸಿಕೊಂಡೆನೇ ಹೊರತು ಯೆಹೋವನು ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು