Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:5 - ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಹರಕೆಯ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ತನ್ನ ವ್ರತ ದಿನಗಳಲ್ಲೆಲ್ಲಾ ಕ್ಷೌರ ಮಾಡಿಸಿಕೊಳ್ಳಬಾರದು. ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ವ್ರತಬದ್ಧನಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬೆಳೆಯಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:5
9 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಮತ್ತು ಅವನು - ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡುವದಾದರೆ ನನ್ನ ಶಕ್ತಿಯು ಹೋಗುವದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.


ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು.


ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಹೋಯಿತು,


ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು.


ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳೆಲ್ಲಾ ದ್ರಾಕ್ಷಾಲತೆಯಿಂದ ಉತ್ಪನ್ನವಾದ ಹೀಚನ್ನಾದರೂ ತೃಣವನ್ನಾದರೂ ತಿನ್ನಬಾರದು.


ಅವರು ತಲೆ ಬೋಳಿಸಬಾರದು, ಕೂದಲನ್ನು ಬೆಳಸಬಾರದು, ಕತ್ತರಿಸಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು