Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:1 - ಕನ್ನಡ ಸತ್ಯವೇದವು J.V. (BSI)

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:1
15 ತಿಳಿವುಗಳ ಹೋಲಿಕೆ  

ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲ್ಯರ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ಹರಿವಾಣಗಳು,12 ಬೆಳ್ಳಿಯ ಬಟ್ಟಲುಗಳು,12 ಚಿನ್ನದ ಧೂಪಾರತಿಗಳು.


ಕುರುಡರೇ, ಯಾವದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪಾವನ ಮಾಡುವ ಯಜ್ಞವೇದಿಯೋ?


ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.


ಸಮಾಧಾನಯಜ್ಞಕ್ಕಾಗಿ ಕೊಟ್ಟ ಪಶುಗಳು - ಹೋರಿಗಳು 24, ಟಗರುಗಳು 60, ಹೋತಗಳು 60, ವರುಷದ ಕುರಿಗಳು 60. ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.


ಪ್ರತಿದಿನದಲ್ಲಿಯೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಿಮಾಡುವದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.


ಗಂಗಾಳವನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.


ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೀಗೆ ಮಾಡಬೇಕು. ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಾಧಿಪತಿಯ ಹೆಸರನ್ನು ಬರೆಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು