Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:11 - ಕನ್ನಡ ಸತ್ಯವೇದವು J.V. (BSI)

11 ಆಗ ಯೆಹೋವನು ಮೋಶೆಗೆ - ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಗೆ, “ಪ್ರತಿದಿನ ಒಬ್ಬ ಪ್ರಧಾನನು ವೇದಿಕೆಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ತರಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿಪೀಠದ ಪ್ರತಿಷ್ಠೆಗಾಗಿ ತಮ್ಮ ಕಾಣಿಕೆಯನ್ನು ಅರ್ಪಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:11
5 ತಿಳಿವುಗಳ ಹೋಲಿಕೆ  

ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.


ಆದರೆ ಎಲ್ಲವೂ ಮರ್ಯಾದೆಯಿಂದಲೂ ಕ್ರಮದಿಂದಲೂ ನಡೆಯಲಿ.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.


ಮೊದಲನೆಯ ದಿನದಲ್ಲಿ ಕಾಣಿಕೆ ತಂದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು