Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:43 - ಕನ್ನಡ ಸತ್ಯವೇದವು J.V. (BSI)

43 ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:43
6 ತಿಳಿವುಗಳ ಹೋಲಿಕೆ  

ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ನೀವು ಅರ್ಪಿಸುವದು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ ಎಂತಲೂ


ಆಗ ಅವಳು ತನ್ನ ತಾಯಿಯ ಬೋಧನೆಯನ್ನು ಕೇಳಿ - ಇಲ್ಲಿಯೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡು ಅಂದಳು.


ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು