Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:62 - ಕನ್ನಡ ಸತ್ಯವೇದವು J.V. (BSI)

62 ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:62
11 ತಿಳಿವುಗಳ ಹೋಲಿಕೆ  

ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ಯರು ಯೆಹೋವನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಾಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧ ಪರ್ವತಕ್ಕೆ ಕರತರುವರು.


ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವದು; ನೀತಿವಂತನ ವಂಶವು ಶುಭಹೊಂದುವದು.


ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.


ಆಗ ಧೂಪದ ಹೊಗೆಯು ದೇವದೂತನ ಕೈಯೊಳಗಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಿಗೆ ಏರಿಹೋಯಿತು.


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು