Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:89 - ಕನ್ನಡ ಸತ್ಯವೇದವು J.V. (BSI)

89 ಮೋಶೆ ಯೆಹೋವನ ಸಂಗಡ ಮಾತಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

89 ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

89 ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

89 ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:89
15 ತಿಳಿವುಗಳ ಹೋಲಿಕೆ  

ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಇದಲ್ಲದೆ ಅವನು ಎಣ್ಣೇಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಗರ್ಭಗೃಹದಲ್ಲಿಡಿಸಿದನು.


ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.


ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಗೆ ಹೀಗೆ ಆಜ್ಞಾಪಿಸಿದನು. -


ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತಾಡಿ ಹೀಗಂದನು - ನೀನು ಇಸ್ರಾಯೇಲ್ಯರಿಗೆ


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.


ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವದರಿಂದಲೂ ಯೆಹೋವನ ತೇಜಸ್ಸು ಗುಡಾರದೊಳಗೆ ತುಂಬಿರುವದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು