Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:11 - ಕನ್ನಡ ಸತ್ಯವೇದವು J.V. (BSI)

11 ಲೇವಿಯರು ಯೆಹೋವನ ಪರಿಚರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ಯರ ನಿವಿುತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಲೇವಿಯರು ಇಸ್ರಯೇಲರ ಪರವಾಗಿ ಸರ್ವೇಶ್ವರನ ಪರಿಚರ್ಯ ಮಾಡಲು ಯೋಗ್ಯರಾಗುವಂತೆ ಆರೋನನು ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಆರೋನನು ಲೇವಿಯರನ್ನು ಯೆಹೋವನಿಗೆ ಇಸ್ರೇಲರ ಕಾಣಿಕೆಯಾಗಿ ಕೊಡುವನು. ಈ ರೀತಿಯಾಗಿ ಲೇವಿಯರು ಯೆಹೋವನ ಪರಿಚರ್ಯ ಕೆಲಸಕ್ಕಾಗಿ ಸಿದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:11
9 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದದ್ದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನೂ ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವದಕ್ಕಾಗಿ ತಂದು ಸಮರ್ಪಿಸಬೇಕು.


ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.


ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.


ಎಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವದಕ್ಕೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ಇಸ್ರಾಯೇಲ್ಯರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನೂ ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನೂ ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲ್ಯರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತನಿಯಮ ಮಾಡಿದ್ದೇನೆ.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು