ಅರಣ್ಯಕಾಂಡ 8:17 - ಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲ್ಯರ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಸ್ರಯೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಪ್ರಾಣಿಗಳೆಲ್ಲವೂ ನನ್ನ ಸೊತ್ತೆಂಬುದೇನೋ ನಿಜ; ಈಜಿಪ್ಟ್ ದೇಶದಲ್ಲಿ ಚೊಚ್ಚಲಾದುದನ್ನೆಲ್ಲ ಸಂಹರಿಸಿದಾಗ ಇಸ್ರಯೇಲರಲ್ಲಿ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಾಪಿಸಿಕೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಸ್ರೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಗಳೂ ನನ್ನ ಸ್ವತ್ತಾಗಿರುವರು. ಈಜಿಪ್ಟ್ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲ ನಾನು ಸಂಹರಿಸಿದಾಗ ಇಸ್ರೇಲರ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು. ಅಧ್ಯಾಯವನ್ನು ನೋಡಿ |