Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:2 - ಕನ್ನಡ ಸತ್ಯವೇದವು J.V. (BSI)

2 ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:2
19 ತಿಳಿವುಗಳ ಹೋಲಿಕೆ  

ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು.


ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ನನ್ನ ಸಂಗಡ ಮಾತಾಡುತ್ತಿದ್ದ ಶಬ್ದವು ಯಾರದೆಂದು ನೋಡುವದಕ್ಕೆ ಹಿಂದಕ್ಕೆ ತಿರುಗಿದೆನು.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು.


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.


ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತಿಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಡಬೇಕು.


ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು; ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಬೀಳುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.


ಚೊಕ್ಕಬಂಗಾರದ ದೀಪಸ್ತಂಭವು, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆಯು ಇವುಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು