ಅರಣ್ಯಕಾಂಡ 8:21 - ಕನ್ನಡ ಸತ್ಯವೇದವು J.V. (BSI)21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು; ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವರನ್ನು ಶುದ್ಧೀಕರಿಸುವದಕ್ಕೆ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದನು. ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ಪಾಪಪರಿಹಾರವನ್ನು ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಬಳಿಕ ಆರೋನನು ಅವರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಕೊಟ್ಟನು. ಆರೋನನು ಅವರನ್ನು ಶುದ್ಧೀಕರಿಸುವುದಕ್ಕಾಗಿ ದೋಷಪರಿಹಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. ಅಧ್ಯಾಯವನ್ನು ನೋಡಿ |