ಅರಣ್ಯಕಾಂಡ 8:26 - ಕನ್ನಡ ಸತ್ಯವೇದವು J.V. (BSI)26 ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದೇ ಹೊರತು ಅವರಿಂದ ಬೇರೆ ಪರಿಚರ್ಯವನ್ನು ಮಾಡಿಸಕೂಡದು. ಲೇವಿಯರು ಕಾಪಾಡಬೇಕಾದವುಗಳ ವಿಷಯದಲ್ಲಿ ನೀನು ಹೀಗೆ ಅವರಿಗೆ ನೇವಿುಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಂಥವರು ತಮ್ಮ ಸ್ವಕುಲದವರ ಜೊತೆ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದು. ಅದೊಂದನ್ನು ಬಿಟ್ಟು ಅವರಿಂದ ಬೇರೆ ಪರಿಚರ್ಯೆಯನ್ನು ಮಾಡಿಸಕೂಡದು. ಲೇವಿಯರು ಮಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ವಿಧಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು. ಅಧ್ಯಾಯವನ್ನು ನೋಡಿ |