Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:14 - ಕನ್ನಡ ಸತ್ಯವೇದವು J.V. (BSI)

14 ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮಲ್ಲಿ ಅನ್ಯದೇಶಿಯನೊಬ್ಬನು ಪ್ರವಾಸಿಯಾಗಿದ್ದು ಸರ್ವೇಶ್ವರನಿಗೆ ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ ಅದನ್ನು ವಿಧಿನಿಯಮಗಳ ಅನುಸಾರವೇ ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಪರದೇಶಿಯಾದವನು ನಿಮ್ಮ ಸಂಗಡ ಇದ್ದು, ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ, ಅದರ ಆಜ್ಞಾವಿಧಿಗಳ ಪ್ರಕಾರವೇ ಆಚರಿಸಲಿ. ಸ್ಥಳೀಯ ಮೂಲದ ಇಸ್ರಾಯೇಲರಿಗೂ ಮತ್ತು ನಿಮ್ಮ ನಡುವೆ ವಾಸಿಸುವ ಪರದೇಶಸ್ತನಿಗೂ ಒಂದೇ ನಿಯಮ ಇರಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:14
14 ತಿಳಿವುಗಳ ಹೋಲಿಕೆ  

ಅನ್ಯರಿಗಾಗಲಿ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ವಿಧಿಯಿರಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,


ಕಳೆದ ಜೂಬಿಲಿ ಸಂವತ್ಸರದಿಂದ ಇಷ್ಟು ವರುಷವಾಯಿತೆಂದು ಲೆಕ್ಕಿಸಿ ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು;


ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.


ದ್ರಾಕ್ಷೆಯ ತೋಟಗಳಲ್ಲಿಯೂ ಹಕ್ಕಲಾಯಕೂಡದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.


ಇಸ್ರಾಯೇಲ್ಯರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.


ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ ಅನ್ಯದೇಶದವನೂ ಹಾಗೆಯೇ ಇರುವನು.


ನಿಮಗೂ ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ಪ್ರಮಾಣವಿಧಿಗಳಿರಬೇಕು.


ಸೆರೆಯಿಂದ ಬಂದ ಇಸ್ರಾಯೇಲ್ಯರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕ ಭೋಜನಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು