Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:5 - ಕನ್ನಡ ಸತ್ಯವೇದವು J.V. (BSI)

5 ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಅದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಅದಕ್ಕನುಗುಣವಾಗಿ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಾಸ್ಕವನ್ನು ಆಚರಿಸಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:5
18 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ಇಳುಕೊಂಡಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕ ಹಬ್ಬವನ್ನು ಆಚರಿಸಿ


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ,


ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲ್ಯರಿಗೆ ತಿಳಿಸಿದನು.


ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ ಆರೋನರೂ ಇಸ್ರಾಯೇಲ್ಯರ ಸಮೂಹದವರೆಲ್ಲರೂ ಮಾಡಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲ್ಯರು ಆ ಕೆಲಸವನ್ನೆಲ್ಲಾ ಮಾಡಿದ್ದರು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಅದನ್ನು ಮಾಡಿದ್ದರು.


ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.


ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


ಆದಕಾರಣ ಮೋಶೆ ಇಸ್ರಾಯೇಲ್ಯರಿಗೆ - ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿ


ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲ್ಯರೆಲ್ಲರೂ ಮಾಡಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು