ಆದಿಕಾಂಡ 1:21 - ಕನ್ನಡ ಸತ್ಯವೇದವು J.V. (BSI)21 ಹೀಗೆ ದೇವರು ಮಹಾಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು. ಅಧ್ಯಾಯವನ್ನು ನೋಡಿ |