Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:22 - ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ದೇವರು ಅವುಗಳಿಗೆ - ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಹೆಚ್ಚಲಿ ಎಂದು ಹೇಳಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದಲ್ಲದೆ ದೇವರು, “ಜಲಚರಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:22
16 ತಿಳಿವುಗಳ ಹೋಲಿಕೆ  

ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿವಿು ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂವಿುಯ ಮೇಲೆ ಬಹುಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ ಎಂದು ಆಜ್ಞಾಪಿಸಲು


ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.


ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವದು.


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು; ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೋಡಿ ಎತ್ತುಗಳೂ ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ - ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು.


ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.


ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.


ನಾನು ಬರುವದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ; ಈಗ ಬಹಳವಾಗಿ ಹೆಚ್ಚಾಯಿತು. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ.


ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.


ಹೀಗೆ ದೇವರು ಮಹಾಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.


ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು