ಆದಿಕಾಂಡ 1:28 - ಕನ್ನಡ ಸತ್ಯವೇದವು J.V. (BSI)28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು. ಅಧ್ಯಾಯವನ್ನು ನೋಡಿ |