Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:29 - ಕನ್ನಡ ಸತ್ಯವೇದವು J.V. (BSI)

29 ಮತ್ತು ದೇವರು - ಇಗೋ, ಸಮಸ್ತಭೂವಿುಯ ಮೇಲೆ ಬೀಜವುಳ್ಳ ಎಲ್ಲಾ ಪೈರುಗಳನ್ನೂ ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇದಲ್ಲದೆ ದೇವರು ಅವರಿಗೆ, “ಬೀಜಫಲಿಸುವ ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರು, “ಇಗೋ, ಭೂಮಿಯ ಮೇಲಿರುವ ಬೀಜಬಿಡುವ ಸಕಲ ಸಸ್ಯಗಳನ್ನೂ ಬೀಜಬಿಡುವ ಸಕಲ ಹಣ್ಣಿನ ಮರಗಳನ್ನೂ ನಿಮಗೆ ಕೊಟ್ಟಿದ್ದೇನೆ. ಅವು ನಿಮಗೆ ಆಹಾರಕ್ಕಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:29
22 ತಿಳಿವುಗಳ ಹೋಲಿಕೆ  

ಭೂವಿುಯ ಮೇಲೆ ತಿರುಗುವ ಎಲ್ಲಾ ಜೀವಜಂತುಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಪೈರುಗಳನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.


ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ.


ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ.


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ಆತನು ಪಶುಗಳಿಗೂ ಕೂಗುತ್ತಿರುವ ಕಾಗೇಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.


ಎಲ್ಲಾ ಜೀವಿಗಳಿಗೂ ಆಹಾರಕೊಡುವವನು ಆತನೇ; ಆತನ ಕೃಪೆಯು ಶಾಶ್ವತವಾದದ್ದು.


ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.


ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ.


ಇದಲ್ಲದೆ ಯೆಹೋವದೇವರು ಆ ಮನುಷ್ಯನಿಗೆ - ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಫವಾಗಿ ತಿನ್ನಬಹುದು;


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.


ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿದವರಿಗೆ ಆಹಾರಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.


ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.


ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಡುವನು.


ಅವರನ್ನು ಮರುಳುಗೊಳಿಸಿ ಮದುವೆಯಾಗಬಾರದೆಂತಲೂ ಇಂಥಿಂಥ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ಆದರೆ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಸಕಲ ವಿಧವಾದ ಆಹಾರವನ್ನೂ ಉಂಟುಮಾಡಿದನು.


ಮತ್ತು ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಡಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು