Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:31 - ಕನ್ನಡ ಸತ್ಯವೇದವು J.V. (BSI)

31 ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅದು ಬಹು ಒಳ್ಳೇದಾಗಿತ್ತು. ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:31
21 ತಿಳಿವುಗಳ ಹೋಲಿಕೆ  

ಆತನು ಉಂಟುಮಾಡಿದ್ದೆಲ್ಲವೂ ಒಳ್ಳೇದೇ; ದೇವರ ಸ್ತೋತ್ರಮಾಡಿ ತೆಗೆದುಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿಷಿದ್ಧವೆಂದು ಹೇಳತಕ್ಕದ್ದಲ್ಲ;


ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.


ಪರಾತ್ಪರನ ಬಾಯಿಮಾತಿನಿಂದಲೇ ಮೇಲು ಕೇಡುಗಳೆರಡೂ ಸಂಭವಿಸುತ್ತವಲ್ಲಾ.


ಭೂಲೋಕದ ಸುಣ್ಣಪಾದಗಳು ಯಾವದರಲ್ಲಿ ನೆಲೆಗೊಂಡವು? ಅದರ ಮೂಲೆಗಲ್ಲನ್ನು ಹಾಕಿದವರು ಯಾರು?


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು.


ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.


ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಎರಡನೆಯ ದಿನವಾಯಿತು.


ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.


ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು.


ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೂರನೆಯ ದಿನವಾಯಿತು.


ದೇವರ ವಾಕ್ಯವನ್ನು ಹೇಳಿ ಪ್ರಾರ್ಥಿಸುವದರಿಂದ ಅದು ಪವಿತ್ರವಾಗುತ್ತದಲ್ಲಾ.


ನನಗೂ ಇಸ್ರಾಯೇಲ್ಯರಿಗೂ ನಡುವೆ ಇದು ಸದಾಕಾಲವೂ ಗುರುತು. ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೆ ವಿಶ್ರವಿುಸಿಕೊಂಡನಲ್ಲವೇ.


ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.


ನೀನು ಒಳ್ಳೆಯವನೂ ಒಳ್ಳೆಯದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ.


ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು