Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:10 - ಕನ್ನಡ ಸತ್ಯವೇದವು J.V. (BSI)

10 ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:10
16 ತಿಳಿವುಗಳ ಹೋಲಿಕೆ  

ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು.


ಅವರು ಪೂರ್ವದಿಕ್ಕಿಗೆ ಮುಂದೆ ಮುಂದೆ ಪ್ರಯಾಣ ಮಾಡುತ್ತಿರುವಾಗ ಶಿನಾರ್ ದೇಶದಲ್ಲಿ ಬೈಲುಸೀಮೆ ಸಿಕ್ಕಲು ಅಲ್ಲೇ ವಾಸಮಾಡಿಕೊಂಡು ತಮ್ಮ ತಮ್ಮೊಳಗೆ -


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ಆ ದಿವಸಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು. ಏಲಾವಿುನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು


ಅವನು ನನಗೆ - ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವದಕ್ಕಾಗಿ ಹೋಗುತ್ತಾರೆ; ಅದು ಸಿದ್ಧವಾದಾಗ ಆ ಸ್ವಂತ ಸ್ಥಳದಲ್ಲಿ ನಿಲ್ಲಿಸಲ್ಪಡುವಳು.


ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?


ಯೆಹೋವನು ಇಂತೆನ್ನುತ್ತಾನೆ - ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ ಅವರನ್ನು ಸಂಹರಿಸಿ ಅನಂತರ ದೇಶವನ್ನು ತೀರಾ ಹಾಳುಮಾಡಿ ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಅವನು ಅತಿ ಸಾಹಸಿಯಾದ ಬೇಟೆಗಾರನು. ನಿಮ್ರೋದನಂತೆ ಅತಿ ಸಾಹಸಿಯಾದ ಬೇಟೆಗಾರನೆಂದು ಈಗಲೂ ಹೇಳುವದುಂಟಲ್ಲಾ.


ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ನುಡಿಸಿದ ವಾಕ್ಯ.


ಹಾರಾನ್ ಕನ್ನೆ ಎದೆನ್ ಸ್ಥಳಗಳವರೂ ಶೆಬ ಅಶ್ಶೂರ್‍ಕಿಲ್ಮದ್ ಪ್ರಾಂತಗಳ ವರ್ತಕರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು