Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:15 - ಕನ್ನಡ ಸತ್ಯವೇದವು J.V. (BSI)

15 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕಾನಾನನು ಸೀದೋನನ ತಂದೆ. ಕಾನಾನನ ಮೊದಲನೆಯ ಮಗನೇ ಸೀದೋನ್. ಇವನು ಹಿತ್ತಿಯರ ಮೂಲಪಿತೃ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:15
18 ತಿಳಿವುಗಳ ಹೋಲಿಕೆ  

ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.


ಕಾನಾನ್‍ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಆಮೇಲೆ ಆಕೆಯ ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ -


ಚೀದೋನೇ, ನಾಚಿಕೆಪಡು; ಸಮುದ್ರವು, ಸಮುದ್ರದುರ್ಗವು - ನಾವು ವೇದನೆಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿಯುವಕರನ್ನು ಸಾಕಿ ಸಲಹಲಿಲ್ಲ ಎಂದು ನುಡಿದಿದೆಯಷ್ಟೆ.


ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಲು ಅವನು - ಆಕೆಯು ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆಯಲ್ಲವೋ ಎಂದು ಉತ್ತರ ಕೊಟ್ಟನು.


ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್, ವಿುಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ವಿುಚ್ಪೆಯ ಬೈಲಿನವರೆಗೂ ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು; ಅವನಿಗೆ ಹಡಗುಗಳು ಸೇರುವ ರೇವು ಇರುವದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವದು.


ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ


ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದರ ವಿಷಯದಲ್ಲಿ ಹೀಗೆ ನುಡಿ -


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.


ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.


ಚೀದೋನಿನವರೂ ಅರ್ವಾದಿನವರೂ ನಿನಗೆ ಹುಟ್ಟುಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು