Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:5 - ಕನ್ನಡ ಸತ್ಯವೇದವು J.V. (BSI)

5 ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಪಟ್ಟಣವನ್ನೂ ಗೋಪುರವನ್ನೂ ನೋಡಲು ಇಳಿದುಬಂದನು. ಜನರು ಅವುಗಳನ್ನು ಕಟ್ಟುತ್ತಿರುವುದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:5
10 ತಿಳಿವುಗಳ ಹೋಲಿಕೆ  

ನಾನು ಇಳಿದು ಹೋಗಿ ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುತ್ತೇನೆ ಅಂದನು.


ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಯೆಹೋವನು ಸೀನಾಯಿಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು - ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದು ಬಂದದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು; ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು