ಆದಿಕಾಂಡ 11:6 - ಕನ್ನಡ ಸತ್ಯವೇದವು J.V. (BSI)6 ನೋಡಿದ ಮೇಲೆ ಆತನು - ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇಷ್ಟು ದೊಡ್ಡ ಕೆಲಸ ಮಾಡುವವರಾಗಿರಲು ಮುಂದೆ ಏನು ಆಲೋಚಿಸಿದರೂ ಇವರಿಗೆ ಅಸಾಧ್ಯವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ. ಅಧ್ಯಾಯವನ್ನು ನೋಡಿ |