Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:7 - ಕನ್ನಡ ಸತ್ಯವೇದವು J.V. (BSI)

7 ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನಾವು ಕೆಳಗೆ ಹೋಗಿ ಅವರ ಭಾಷೆಯನ್ನು ತಾರುಮಾರು ಮಾಡೋಣ; ಆಗ ಅವರು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:7
20 ತಿಳಿವುಗಳ ಹೋಲಿಕೆ  

ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಕರ್ತನೇ, ಅವರ ಭಾಷೆಯನ್ನು ತಾರು ಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹಬಲಾತ್ಕಾರಗಳು ಕಾಣಬರುತ್ತವೆ.


ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.


ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಬಂದಾಗ ಎಲ್ಲರೂ ವಾಣಿಗಳನ್ನಾಡಿದರೆ ಈ ವರವನ್ನು ಹೊಂದದಿರುವ ಸಭೆಯವರು ಅಥವಾ ಕ್ರಿಸ್ತನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ - ನಿಮಗೆ ಹುಚ್ಚು ಹಿಡಿದದೆ ಎಂದು ಹೇಳುವದಿಲ್ಲವೋ?


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಪರಲೋಕದಲ್ಲಿ ಆಸನಾರೂಢನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.


ಆಲೋಚನಾಕರ್ತರ ವಾಕ್ಚಾತುರ್ಯವನ್ನು ಹಾರಿಸಿ ಹಿರಿಯರ ವಿವೇಕವನ್ನು ತೆಗೆದುಹಾಕುವನು.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಆಗ, ಯಾವನನ್ನು ಕಳುಹಿಸಲಿ, ಯಾವನು ನಮಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಕೇಳಿ, ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು ಅಂದೆನು.


ಯೋಸೇಫನು ದ್ವಿಭಾಷಿಯ ಮುಖಾಂತರ ಅವರ ಸಂಗಡ ಮಾತಾಡಿದದರಿಂದ, ಅವರು ತಮ್ಮ ಮಾತು ಅವನಿಗೆ ಗೊತ್ತಾಗುವದೆಂದು ನೆನಸಲೇ ಇಲ್ಲ.


ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.


ಕುಲಭಾಷಾ ದೇಶಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.


ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು


ಸಂತತಿ ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದನಂತರ ಭೂವಿುಯ ಮೇಲೆ ಹರಡಿಕೊಂಡ ಜನಾಂಗಗಳವರು ಇವರೇ.


ದೇಶಭಾಷಾ ಕುಲಜನಾಂಗಗಳ ಪ್ರಕಾರ [ಇವರೇ ಯೆಫೆತನ ವಂಶದವರು].


ಮನುಷ್ಯರಿಗೆ ಬಾಯಿ ಕೊಟ್ಟವರಾರು? ಒಬ್ಬನು ಮೂಕನಾಗಿ ಮತ್ತೊಬ್ಬನು ಕಿವುಡನಾಗಿ ಒಬ್ಬನು ಕಣ್ಣುಳ್ಳವನಾಗಿ ಮತ್ತೊಬ್ಬನು ಕಣ್ಣಿಲ್ಲದವನಾಗಿ ಇರಬೇಕೆಂದು ನೇವಿುಸಿದವರಾರು? ಯೆಹೋವನಾಗಿರುವ ನಾನಲ್ಲವೇ.


ನಿಮಗೆ ತಿಳಿಯಲಾಗದ ಅನ್ಯಭಾಷೆಯನ್ನೂ ನೀವು ಗ್ರಹಿಸಲಾರದ ತೊದಲುಮಾತುಗಳನ್ನೂ ಆಡುವ ಆ ಕ್ರೂರಜನರನ್ನು ಕಾಣದೆ ಇರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು