Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:9 - ಕನ್ನಡ ಸತ್ಯವೇದವು J.V. (BSI)

9 ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್‍’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:9
10 ತಿಳಿವುಗಳ ಹೋಲಿಕೆ  

ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಕುಲಭಾಷಾ ದೇಶಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.


ದೇಶಭಾಷಾ ಕುಲಜನಾಂಗಗಳ ಪ್ರಕಾರ [ಇವರೇ ಯೆಫೆತನ ವಂಶದವರು].


ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಬಂದಾಗ ಎಲ್ಲರೂ ವಾಣಿಗಳನ್ನಾಡಿದರೆ ಈ ವರವನ್ನು ಹೊಂದದಿರುವ ಸಭೆಯವರು ಅಥವಾ ಕ್ರಿಸ್ತನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ - ನಿಮಗೆ ಹುಚ್ಚು ಹಿಡಿದದೆ ಎಂದು ಹೇಳುವದಿಲ್ಲವೋ?


ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂವಿುಯ ಜನಗಳು ವಿಂಗಡವಾದವು. ಅವನ ತಮ್ಮನ ಹೆಸರು ಯೊಕ್ತಾನ್.


ಕರ್ತನೇ, ಅವರ ಭಾಷೆಯನ್ನು ತಾರು ಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹಬಲಾತ್ಕಾರಗಳು ಕಾಣಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು