Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:10 - ಕನ್ನಡ ಸತ್ಯವೇದವು J.V. (BSI)

10 ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:10
21 ತಿಳಿವುಗಳ ಹೋಲಿಕೆ  

ಆ ದೇಶದಲ್ಲಿ ಬರವು ಬಹುಘೋರವಾಗಿತ್ತು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಆಗ ಐಗುಪ್ತ ಕಾನಾನ್‍ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ನಮ್ಮ ಪಿತೃಗಳಿಗೆ ಕಾಳುಕಡ್ಡಿ ಸಿಕ್ಕಲಿಲ್ಲ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಬರದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ.


ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.


ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.


ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು.


ನ್ಯಾಯಸ್ಥಾಪಕರು ಆಳುತ್ತಿದ್ದಾಗ ದೇಶದಲ್ಲಿ ಬರ ಬಂದದರಿಂದ ಯೆಹೂದಪ್ರಾಂತದ ಬೇತ್ಲೆಹೇವಿುನವನೊಬ್ಬನು ತನ್ನ ಹೆಂಡತಿ, ಇಬ್ಬರು ಕುಮಾರರು ಇವರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೊರಟುಹೋದನು.


ಬರವು ಬಹು ಘೋರವಾಗಿದ್ದದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿವಿುತ್ತ ಐಗುಪ್ತದೇಶದವರಿಗೂ ಕಾನಾನ್‍ದೇಶದವರಿಗೂ ದಿಕ್ಕುತೋರದೆ ಹೋಯಿತು.


ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಐಗುಪ್ತದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು; ಕಾನಾನ್ ದೇಶದಲ್ಲಿಯೂ ಬರವಿತ್ತಷ್ಟೆ.


ಇದಲ್ಲದೆ ಭೂಲೋಕದಲ್ಲೆಲ್ಲಾ ಬರವು ಭಯಂಕರವಾಗಿದ್ದದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ಬರವು ಲೋಕದಲ್ಲೆಲ್ಲಾ ಹರಡಿಕೊಂಡಿರುವಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗಿಸಿ ಐಗುಪ್ತ್ಯರಿಗೆ ಧಾನ್ಯವನ್ನು ಮಾರಿಸಿದನು. ಐಗುಪ್ತದೇಶದಲ್ಲಿ ಬರವು ಬಹು ಘೋರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು