ಆದಿಕಾಂಡ 12:12 - ಕನ್ನಡ ಸತ್ಯವೇದವು J.V. (BSI)12 ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; ಐಗುಪ್ತದೇಶದವರು ನಿನ್ನನ್ನು ಕಂಡು - ಈಕೆಯು ಇವನ ಹೆಂಡತಿ ಎಂದು ನನ್ನನ್ನು ಕೊಂದು ನಿನ್ನನ್ನು ಉಳಿಸಾರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈಜಿಪ್ಟಿನವರು ನಿನ್ನನ್ನು ನೋಡಿ, ನೀನು ನನ್ನ ಹೆಂಡತಿಯಾಗಿರಬಹುದೆಂದು ಊಹಿಸಿ, ನನ್ನನ್ನು ಕೊಂದು ನಿನ್ನನ್ನು ಜೀವದಿಂದ ಉಳಿಸಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈಜಿಪ್ಟಿನ ಗಂಡಸರು ನಿನ್ನನ್ನು ನೋಡಿ, ‘ಈಕೆ ಇವನ ಹೆಂಡತಿ’ ಎಂದು ತಿಳಿದು ನಿನ್ನನ್ನು ಪಡೆದುಕೊಳ್ಳುವುದಕ್ಕಾಗಿ ನನ್ನನ್ನು ಕೊಂದು ನಿನ್ನನ್ನು ಜೀವಂತವಾಗಿ ಉಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹೀಗಿರುವುದರಿಂದ ಈಜಿಪ್ಟಿನವರು ನಿನ್ನನ್ನು ಕಂಡು, ‘ಈಕೆಯು ಅವನ ಹೆಂಡತಿ’ ಎಂದು ಹೇಳಿ, ನನ್ನನ್ನು ಕೊಂದುಹಾಕಿ, ನಿನ್ನನ್ನು ಉಳಿಸುವರು. ಅಧ್ಯಾಯವನ್ನು ನೋಡಿ |