Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:14 - ಕನ್ನಡ ಸತ್ಯವೇದವು J.V. (BSI)

14 ಅಬ್ರಾಮನು ಐಗುಪ್ತದೇಶಕ್ಕೆ ಬಂದಾಗ ಐಗುಪ್ತ್ಯರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿಯೆಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಬ್ರಾಮನು ಈಜಿಪ್ಟಿಗೆ ಬಂದಾಗ ಈಜಿಪ್ಟಿನವರು ಅವನ ಸಂಗಡ ಇದ್ದ ಹೆಣ್ಣು ಬಹಳ ಚೆಲುವೆಯೆಂದುಕೊಂಡರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಂತೆಯೇ ಅಬ್ರಾಮನು ಈಜಿಪ್ಟಿಗೆ ಹೋದನು. ಈಜಿಪ್ಟಿನ ಗಂಡಸರು ಸಾರಯಳನ್ನು ಕಂಡು ಈಕೆ ತುಂಬ ರೂಪವತಿ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಬ್ರಾಮನು ಈಜಿಪ್ಟಿಗೆ ಬಂದಾಗ, ಈಜಿಪ್ಟಿನವರು, ಆ ಸಾರಯಳು ಬಹಳ ಸುಂದರಿ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:14
7 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.


ಹೀಗಿರುವಲ್ಲಿ ಅವನ ದಣಿಯ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ ತನ್ನೊಡನೆ ಸಂಗಮಕ್ಕೆ ಕರೆದಳು.


ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.


ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು.


ಫರೋಹನ ಪ್ರಧಾನರು ಆಕೆಯನ್ನು ನೋಡಿ ಬಂದು ಅವನ ಮುಂದೆ ಹೊಗಳಲಾಗಿ


ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿಹೀನವಾಗಿದ್ದವು; ರಾಹೇಲಳು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು