Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:16 - ಕನ್ನಡ ಸತ್ಯವೇದವು J.V. (BSI)

16 ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರತರಿಸಿ ಆಕೆಯ ನಿವಿುತ್ತ ಅಬ್ರಾಮನಿಗೆ ಉಪಕಾರ ಮಾಡಿದನು. ಆಗ ಅಬ್ರಾಮನಿಗೆ ಕುರಿದನಗಳೂ ಗಂಡು ಹೆಣ್ಣು ಕತ್ತೆಗಳೂ ದಾಸದಾಸಿಯರೂ ಒಂಟೆಗಳೂ ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೆಯದನ್ನು ಮಾಡಿದನು. ಅವನಿಗೆ ಕುರಿ, ಎತ್ತು, ಕತ್ತೆಗಳೂ ದಾಸದಾಸಿಯರೂ ಹೆಣ್ಣು ಕತ್ತೆಗಳೂ ಒಂಟೆಗಳೂ ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:16
13 ತಿಳಿವುಗಳ ಹೋಲಿಕೆ  

ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ -


ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು; ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೋಡಿ ಎತ್ತುಗಳೂ ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು.


ಅವನಿಗೆ ದನಕುರಿಗಳ ಸಂಪತ್ತೂ ಅನೇಕ ಸೇವಕಜನವೂ ಇದ್ದವು. ಇದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟದ್ದರಿಂದ ಅವನು ಧನವಂತನಾದನು.


ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ


ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆಹೋಯಿತು. ಅವರಿಬ್ಬರ ಆಸ್ತಿ ಬಹಳವಾದದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರುವದು ಅಸಾಧ್ಯವಾಯಿತು.


ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.


ಯಾಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ದೊಡ್ಡ ಹಿಂಡುಗಳೂ ದಾಸದಾಸಿಯರೂ ಒಂಟೆಕತ್ತೆಗಳೂ ಹೇರಳವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು