Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:18 - ಕನ್ನಡ ಸತ್ಯವೇದವು J.V. (BSI)

18 ಆಗ ಫರೋಹನು ಅಬ್ರಾಮನನ್ನು ಕರಿಸಿ - ಯಾಕೆ ಹೀಗೆ ಮಾಡಿದೆ? ಹೆಂಡತಿಯೆಂದು ಯಾಕೆ ನನಗೆ ತಿಳಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಫರೋಹನು ಅಬ್ರಾಮನನ್ನು ಕರೆಸಿ, “ನೀನು ಮಾಡಿರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:18
15 ತಿಳಿವುಗಳ ಹೋಲಿಕೆ  

ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಆಗ ಸೌಲನು ಯೋನಾತಾನನನ್ನು - ನೀನು ಏನು ಮಾಡಿದ್ದೀ, ಹೇಳು ಎಂದು ಕೇಳಲು ಅವನು - ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ಸಾಯುವದಕ್ಕೆ ಸಿದ್ಧನಾಗಿದ್ದೇನೆ ಎಂದು ಉತ್ತರಕೊಟ್ಟನು.


ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಅವರು ಅವನೆದುರಿಗೆ ಅಡ್ಡಬೀಳಲು ಯೋಸೇಫನು ಅವರನ್ನು - ನೀವು ಮಾಡಿರುವ ಈ ಕೃತ್ಯವು ಏನು! ನನ್ನಂಥವನು ಶಕುನ ನೋಡಿ ಗುಟ್ಟನ್ನು ಬಿಚ್ಚುವನೆಂಬದು


ಲಾಬಾನನು ಯಾಕೋಬನಿಗೆ - ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಓಡಿ ಬಂದಿಯಲ್ಲಾ.


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ಯೆಹೋವದೇವರು ಸ್ತ್ರೀಯನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಸ್ತ್ರೀಯು - ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು ಎಂದು ಉತ್ತರ ಕೊಟ್ಟಳು.


ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು ಎಂದು ಹೇಳಿ


ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.


ಬೆಳಿಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು


ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?


ಅರಸನ ಬಳಿಗೆ ಹೋಗಿ - ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ; ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು