Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:3 - ಕನ್ನಡ ಸತ್ಯವೇದವು J.V. (BSI)

3 ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 "ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:3
27 ತಿಳಿವುಗಳ ಹೋಲಿಕೆ  

ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.


ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.


ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ


ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ;


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ ಆಸ್ತಿಯ ಮೇಲೆಯೂ ಅಧ್ಯಕ್ಷನಾಗಿ ಇಟ್ಟಂದಿನಿಂದ ಯೆಹೋವನು ಯೋಸೇಫನ ನಿವಿುತ್ತವಾಗಿ ಆ ಐಗುಪ್ತ್ಯನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.


ನಾನು ಬರುವದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ; ಈಗ ಬಹಳವಾಗಿ ಹೆಚ್ಚಾಯಿತು. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟದ್ದರಿಂದ ಅವನು ಧನವಂತನಾದನು.


ಅಬ್ರಹಾಮನು ತೀರಿಹೋದನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನಿಗೂ ಉಂಟಾಯಿತು. ಇಸಾಕನು ಲಹೈರೋಯಿ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದೊಡನೆ ಕಳುಹಿಸಿದೆವಲ್ಲಾ; ಅದರಂತೆ ನೀನು ನಮಗೆ ಕೇಡನ್ನು ಮಾಡುವದಿಲ್ಲವೆಂಬದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಷ್ಟೆ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು