Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:7 - ಕನ್ನಡ ಸತ್ಯವೇದವು J.V. (BSI)

7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:7
55 ತಿಳಿವುಗಳ ಹೋಲಿಕೆ  

ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಅಬ್ರಹಾಮನು ಮಧ್ಯಾಹ್ನದಲ್ಲಿ ಮಮ್ರೇತೋಪಿನ ತನ್ನ ಗುಡಾರದ ಬಾಗಲಲ್ಲಿ ಕೂತಿರುವಾಗ ಯೆಹೋವನು ಅವನಿಗೆ ದರ್ಶನಕೊಟ್ಟನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಪೂರ್ವದಲ್ಲಿ ಗುಡಾರಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಕ್ಷೇತ್ರಕ್ಕೆ ತಿರಿಗಿ ಬಂದು ಅಲ್ಲಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಐಗುಪ್ತದೇಶದಿಂದ ಕರತಂದ ಜನರನ್ನು ನಿನ್ನ ಸಂಗಡ ಕರಕೊಂಡು ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ - ನಿಮ್ಮ ಸಂತತಿಯವರಿಗೆ ಕೊಡುವೆನೆಂದು ಪ್ರಮಾಣ ಮಾಡಿ ಕೊಟ್ಟ ದೇಶಕ್ಕೆ ಹೊರಟುಹೋಗು.


ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.


ಐಗುಪ್ತದೇಶದೊಳಗಿಂದ ಬಂದ ಈ ಜನರೊಳಗೆ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದದರಿಂದ ಅವರೊಳಗೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಒಬ್ಬನಾದರೂ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ನೋಡುವದೇ ಇಲ್ಲ ಎಂದು ಖಂಡಿತವಾಗಿ ಹೇಳಿದನು.


ಅವನು ಅಲ್ಲಿಂದ ಹೊರಟು ಬೇತೇಲಿಗೆ ಮೂಡಲಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿಸಿ ಇಳುಕೊಂಡನು; ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರೂ ಇದ್ದವು. ಅಲ್ಲಿಯೂ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು.


ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ, ವಾಗ್ದಾನಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬದು.


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತಾಡಿ -


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ.


ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ನಾನು ಯೆಹೋವನು; ಅಬ್ರಹಾಮ ಇಸಾಕ ಯಾಕೋಬರಿಗೆ ನಾನು ಸರ್ವಶಕ್ತನಾದ ದೇವರೆಂಬ ಹೆಸರುಳ್ಳವನಾಗಿ ಕಾಣಿಸಿಕೊಂಡೆನೇ ಹೊರತು ಯೆಹೋವನು ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಮಾಡಿ ಅದರ ಮೇಲೆ ಶುದ್ಧವಾದ ಎಲ್ಲಾ ಪಶುಪಕ್ಷಿಜಾತಿಗಳಲ್ಲಿ ಸರ್ವಾಂಗಹೋಮ ಮಾಡಿದನು.


ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.


ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.


ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.


ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋಗಲು ದೇವರು ಅಲ್ಲೇ ಅವನಿಗೆ ಪ್ರತ್ಯಕ್ಷನಾದದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ನಾನು ಅಬ್ರಹಾಮ್ ಇಸಾಕರಿಗೆ ವಾಗ್ದಾನಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು ಎಂದು ಹೇಳಿ


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟು -


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -


ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.


ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.


ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ್ದಂತೆಯೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೂ ಯೆಹೋಶುವನು ಆ ಸಮಯದಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಉಳಿ ಮುಂತಾದವುಗಳನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದಲ್ಲಿರುವ ಯೊರ್ದನ್ ತೀರ ಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾವೇದಿಯನ್ನು ಕಟ್ಟಿದರು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ಯೆಹೋವನ ಹೆಸರಿಗೋಸ್ಕರ ಒಂದು ವೇದಿಯನ್ನು ಕಟ್ಟಿಸಿ ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ ಕಾಲುವೆಮಾಡಿಸಿದನು.


ನೀವು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್ ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ.


ಈಗ ಇವರು ಉಪಕಾರಕ್ಕೆ ಅಪಕಾರಮಾಡಿ ನೀನು ನಮಗೆ ಅನುಗ್ರಹಿಸಿದ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಪಡಿಸುವದಕ್ಕೋಸ್ಕರ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು.


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು