ಆದಿಕಾಂಡ 12:8 - ಕನ್ನಡ ಸತ್ಯವೇದವು J.V. (BSI)8 ಅವನು ಅಲ್ಲಿಂದ ಹೊರಟು ಬೇತೇಲಿಗೆ ಮೂಡಲಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿಸಿ ಇಳುಕೊಂಡನು; ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರೂ ಇದ್ದವು. ಅಲ್ಲಿಯೂ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು. ಅಧ್ಯಾಯವನ್ನು ನೋಡಿ |