Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:11 - ಕನ್ನಡ ಸತ್ಯವೇದವು J.V. (BSI)

11 ಆದದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆದುಕೊಂಡು ಮೂಡಣ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಪ್ರತ್ಯೇಕವಾದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:11
11 ತಿಳಿವುಗಳ ಹೋಲಿಕೆ  

ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ಸಭೆಯಾಗಿ ಕೂಡಿಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿಸೋಣ. ಕರ್ತನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.


ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.


ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.


ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ - ನೀನಿರುವ ಸ್ಥಳದಿಂದ ದಕ್ಷಿಣೋತ್ತರಪೂರ್ವಪಶ್ಚಿಮಗಳಿಗೆ ಕಣ್ಣೆತ್ತಿ ನೋಡು.


ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು.


ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.


ಅಬ್ರಾಮನು ಕಾನಾನ್‍ದೇಶದಲ್ಲಿ ವಾಸಮಾಡಿದನು; ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ಗುಡಾರ ಹಾಕಿಸಿ ವಸತಿ ಮಾಡುತ್ತಾ ಸೊದೋವಿುಗೆ ಬಂದನು.


ಮೂಡಲಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯು ಎಲ್ಲೆಯಾಗಿರುವದು; [ಬಡಗಣ] ಮೇರೆಯಿಂದ ಮೂಡಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. ಇದು ಮೂಡಣ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು