Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:13
27 ತಿಳಿವುಗಳ ಹೋಲಿಕೆ  

ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ.


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರ ಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣವಾದದ್ದನ್ನು ನಡಿಸಿ ತಮ್ಮ ಭ್ರಾಂತಿಗೆ ತಕ್ಕ ಫಲವನ್ನು ತಮ್ಮಲ್ಲಿ ಹೊಂದುವವರಾದರು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಇದಲ್ಲದೆ ಯೆಹೋವನು - ಸೊದೋಮ್ ಗೊಮೋರಗಳ ವಿಷಯವಾಗಿ ಎಷ್ಟೋ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು;


ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಅನಂತರ ಆತನು ಅವನ ಮನೆಯಲ್ಲಿ ಊಟಕ್ಕೆ ಕೂತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಙ್ತಿಯಲ್ಲೇ ಕೂತುಕೊಂಡರು.


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಆತನು ನಿನಗೆ - ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು ಎಂದು ಹೇಳಿದನು.


ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ಅವನು ಅತಿ ಸಾಹಸಿಯಾದ ಬೇಟೆಗಾರನು. ನಿಮ್ರೋದನಂತೆ ಅತಿ ಸಾಹಸಿಯಾದ ಬೇಟೆಗಾರನೆಂದು ಈಗಲೂ ಹೇಳುವದುಂಟಲ್ಲಾ.


ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.


ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.


ನಾವು ಈ ಸ್ಥಳವನ್ನು ನಾಶಮಾಡುವದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ ಎಂದು ಹೇಳಿದರು.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.


ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು