Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:18 - ಕನ್ನಡ ಸತ್ಯವೇದವು J.V. (BSI)

18 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:18
17 ತಿಳಿವುಗಳ ಹೋಲಿಕೆ  

ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೊನೆಂಬ ಕಿರ್ಯತರ್ಬಕ್ಕೆ ಸೇರಿರುವದು; ಅದೇ ಅಬ್ರಹಾಮ್ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಅಬ್ರಹಾಮನು ಮಧ್ಯಾಹ್ನದಲ್ಲಿ ಮಮ್ರೇತೋಪಿನ ತನ್ನ ಗುಡಾರದ ಬಾಗಲಲ್ಲಿ ಕೂತಿರುವಾಗ ಯೆಹೋವನು ಅವನಿಗೆ ದರ್ಶನಕೊಟ್ಟನು.


ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಮಾಡಿ ಅದರ ಮೇಲೆ ಶುದ್ಧವಾದ ಎಲ್ಲಾ ಪಶುಪಕ್ಷಿಜಾತಿಗಳಲ್ಲಿ ಸರ್ವಾಂಗಹೋಮ ಮಾಡಿದನು.


ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.


ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.


ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಪೂರ್ವದಲ್ಲಿ ಗುಡಾರಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಕ್ಷೇತ್ರಕ್ಕೆ ತಿರಿಗಿ ಬಂದು ಅಲ್ಲಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು.


ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು.


ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.


ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.


ಅನಂತರ ದಾವೀದನು ಯೆಹೋವನನ್ನು - ನಾನು ಯೆಹೂದದೇಶದ ಯಾವದಾದರೊಂದು ಪಟ್ಟಣಕ್ಕೆ ಹೋಗಬಹುದೋ ಎಂದು ಕೇಳಲು ಆತನು - ಹೋಗಬಹುದು ಅಂದನು. ಅವನು ತಿರಿಗಿ - ಯಾವ ಊರಿಗೆ ಹೋಗಲಿ ಎಂದು ಕೇಳಿದ್ದಕ್ಕೆ - ಹೆಬ್ರೋನಿಗೆ ಹೋಗು ಎಂಬ ಉತ್ತರ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು