Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:5 - ಕನ್ನಡ ಸತ್ಯವೇದವು J.V. (BSI)

5 ಅವನ ಜೊತೆಯಲ್ಲಿದ್ದ ಲೋಟನಿಗೂ ಕುರಿದನ ಗುಡಾರಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೆ ಕುರಿಮಂದೆಗಳೂ ದನಕರುಗಳೂ ಗುಡಾರಬಿಡಾರಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಕಾಲದಲ್ಲಿ ಲೋಟನು ಸಹ ಅಬ್ರಾಮನೊಡನೆ ಪ್ರಯಾಣಮಾಡುತ್ತಿದ್ದನು. ಲೋಟನಿಗೂ ಸಹ ಕುರಿಮಂದೆಗಳೂ ಪಶುಹಿಂಡುಗಳೂ ಗುಡಾರಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:5
6 ತಿಳಿವುಗಳ ಹೋಲಿಕೆ  

ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು, ಅವರ ಪರದೆಗಳನ್ನೂ, ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ಸುತ್ತುಮುತ್ತಲು ದಿಗಿಲು ಎಂಬದಾಗಿ ಅವರ ಕಡೆಗೆ ಕೂಗುವರು.


ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು.


ಆದಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುವವರಾಗಿದ್ದು ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.


ಅವನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತಾನೂ ಲೋಟನೂ ಖಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸದಾಸಿಯರನ್ನೂ ತೆಗೆದುಕೊಂಡು ಹೋಗಿ ಕಾನಾನ್ ದೇಶಕ್ಕೆ ಸೇರಿದನು.


ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆಹೋಯಿತು. ಅವರಿಬ್ಬರ ಆಸ್ತಿ ಬಹಳವಾದದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರುವದು ಅಸಾಧ್ಯವಾಯಿತು.


ಯೆಹೋವನು ಹೇಳಿದ ಮೇರೆಗೆ ಅಬ್ರಾಮನು ಹೊರಟುಹೋದನು; ಲೋಟನೂ ಸಂಗಡ ಹೋದನು. ಅಬ್ರಾಮನು ಖಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು