Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:8 - ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:8
30 ತಿಳಿವುಗಳ ಹೋಲಿಕೆ  

ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.


ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!


ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರಸ್ನೇಹವನ್ನೂ ಸಹೋದರಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ.


ಕ್ರೈಸ್ತ ಸಹೋದರರು ಅಣ್ಣತಮ್ಮಂದಿರೆಂದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಮಾನಮರ್ಯಾದೆಯನ್ನು ತೋರಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ವ್ಯಾಜ್ಯಕ್ಕೆ ದೂರನು ಮಾನಕ್ಕೆ ಯೋಗ್ಯನು; ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.


ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿಯು ದೇವರಿಂದಾಗಿದೆ, ಮತ್ತು ಪ್ರೀತಿಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಸಹೋದರ ಸ್ನೇಹವು ನೆಲೆಯಾಗಿರಲಿ.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ.


ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.


ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಮರುದಿವಸ ಅವನು ಹೊರಟುಹೋಗಿ ನೋಡಿದಾಗ ಇಬ್ಬರು ಇಬ್ರಿಯರೇ ಜಗಳವಾಡುತ್ತಿದ್ದರು. ಅನ್ಯಾಯ ಮಾಡುತ್ತಿದ್ದವನಿಗೆ ಅವನು - ಏನಯ್ಯಾ, ನೀನು ಯಾಕೆ ಸ್ವಕುಲದವನನ್ನು ಹೊಡೆಯುತ್ತೀ ಎಂದು ಕೇಳಿದಾಗ


ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು.


ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.


ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆವಿುಗೆ ಬಂದನು. ಶೆಕೆವಿುನ ಹಿರಿಯರು ಅವನಲ್ಲಿ ಭರವಸವಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು