Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:9 - ಕನ್ನಡ ಸತ್ಯವೇದವು J.V. (BSI)

9 ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:9
11 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ದೇಶವೆಲ್ಲಾ ನಿಮ್ಮ ಮುಂದೆ ಅದೆ; ಅದರಲ್ಲಿ ವಾಸಿಸಿ ವ್ಯಾಪಾರಮಾಡಿ ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು ಎಂದು ಹೇಳಿದನು.


ಇಗೋ ನನ್ನ ದೇಶವು; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ವಾಸಮಾಡಬಹುದು ಅಂದನು.


ಅದಕ್ಕಿಂತ ಅನ್ಯಾಯವನ್ನು ಯಾಕೆ ಸಹಿಸಬಾರದು? ಆಸ್ತಿಯ ನಷ್ಟವನ್ನು ಯಾಕೆ ತಾಳಬಾರದು?


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ನಾನು ಸಮಾಧಾನಪ್ರಿಯನು; ಅವರೋ, ಮಾತಾಡಿದರೆ ಯುದ್ಧಕ್ಕೆ ಬರುತ್ತಾರೆ.


ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.


ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು