Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:13 - ಕನ್ನಡ ಸತ್ಯವೇದವು J.V. (BSI)

13 ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:13
23 ತಿಳಿವುಗಳ ಹೋಲಿಕೆ  

ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಇರಲಿ ಎಂದು ಹೇಳಿದನು.


ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು;


ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಎಂದು ಹೇಳಿದನು.


ಅದೇ ದಿವಸ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು


ಇಸ್ರಾಯೇಲ್ಯರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ -


ಮೋಶೆ ದೊಡ್ಡವನಾದ ಮೇಲೆ ಸ್ವಜನರ ಬಳಿಗೆ ಹೋಗಿ ಇವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಒಂದು ದಿವಸ ಅವನು ತನ್ನ ಜನರಾದ ಇಬ್ರಿಯರೊಳಗೆ ಒಬ್ಬನನ್ನು ಐಗುಪ್ತ್ಯನೊಬ್ಬನು ಹೊಡೆಯುವದನ್ನು ಕಂಡು


ಅದನ್ನು ತೆರೆದು ನೋಡುವಾಗ ಆಹಾ, ಅಳುವ ಕೂಸು. ಆಕೆ ಅದರ ಮೇಲೆ ಕನಿಕರಪಟ್ಟು - ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದೆಂದು ಹೇಳಿದಳು.


ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಐಗುಪ್ತ್ಯರು ಇಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವದಿಲ್ಲ; ಅದು ಅವರಿಗೆ ಅಸಹ್ಯ.


ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು; ಅವನು ದಳವಾಯಿಯ ದಾಸನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ಹೇಳಿದನು; ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.


ಅಬ್ರಹಾಮನು ಮಧ್ಯಾಹ್ನದಲ್ಲಿ ಮಮ್ರೇತೋಪಿನ ತನ್ನ ಗುಡಾರದ ಬಾಗಲಲ್ಲಿ ಕೂತಿರುವಾಗ ಯೆಹೋವನು ಅವನಿಗೆ ದರ್ಶನಕೊಟ್ಟನು.


ಆಗ ಅಬ್ರಹಾಮನು ಅಬೀಮೆಲೆಕನಿಗೆ ಕುರಿದನಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರೂ ಒಡಂಬಡಿಕೆಮಾಡಿಕೊಂಡರು.


ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಸೇನಾಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೊರಟು ಹೋದರು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.


ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯಿದರು; ಇಬ್ಬರು ಅದನ್ನು ಅಡ್ಡದಂಡಿಗೆಯಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನೂ ತಂದರು.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.


ಅದಕ್ಕೆ ಅಬ್ರಹಾಮನು - ಹಾಗೆಯೇ ಪ್ರಮಾಣ ಮಾಡುತ್ತೇನೆ ಅಂದನು.


ಆಗ ಫಿಲಿಷ್ಟಿಯಪ್ರಭುಗಳು - ಈ ಇಬ್ರಿಯರು ಯಾಕೆ ಎಂದು ಆಕೀಷನನ್ನು ಕೇಳಲು ಅವನು ಅವರಿಗೆ - ಇವನು ಇಸ್ರಾಯೇಲ್ಯರ ಅರಸನಾದ ಸೌಲನ ಸೇವಕ ದಾವೀದನಲ್ಲವೋ? ಇವನು ಇಷ್ಟು ವರುಷ ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲಿದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು