ಆದಿಕಾಂಡ 14:17 - ಕನ್ನಡ ಸತ್ಯವೇದವು J.V. (BSI)17 ಅವನು ಕೆದೊರ್ಲಗೋಮರನನ್ನೂ ಅವನೊಂದಿಗೆ ಇದ್ದ ರಾಜರನ್ನೂ ಹೊಡೆದು ಬಂದಮೇಲೆ ಸೊದೋವಿುನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಎದುರುಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಬ್ರಾಮನು ಕೆದೊರ್ಲಗೋಮರನನ್ನೂ ಅವನೊಂದಿಗಿದ್ದ ರಾಜರನ್ನೂ ಸೋಲಿಸಿ ಬಂದಾಗ ಸೊದೋಮಿನ ಅರಸನು ಅವನನ್ನು ಶಾವೆ ತಗ್ಗಿನಲ್ಲಿ (ಅದಕ್ಕೆ ಅರಸನ ತಗ್ಗು ಎಂಬ ಹೆಸರೂ ಉಂಟು) ಭೇಟಿಯಾಗಲು ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣಿವೆಗೆ ಹೋದನು. (ಈಗ ಇದಕ್ಕೆ ರಾಜನ ಕಣಿವೆ ಎಂದು ಕರೆಯುತ್ತಾರೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅಧ್ಯಾಯವನ್ನು ನೋಡಿ |