ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.
ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.
ಆಗ ಅವನು - ನನ್ನ ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರನ್ನು ನೋಡಿ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮುಂಚಿಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.
ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ, ಯಾವದನ್ನರ್ಪಿಸಿ ಮಹೋನ್ನತದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನೂ ಒಂದು ವರುಷದ ಕರುಗಳನ್ನೂ ತೆಗೆದುಕೊಂಡುಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?