Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:7 - ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:7
19 ತಿಳಿವುಗಳ ಹೋಲಿಕೆ  

ದೂತರು ಬಂದು ಯೆಹೋಷಾಫಾಟನಿಗೆ - ಮಹಾಸಮೂಹವು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿರುತ್ತಾರೆಂದು ತಿಳಿಸಿದಾಗ


ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಹೋಗುತ್ತಾ ಹೋಗುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿಕೊಂಡು ಕೆಲವು ಕಾಲ ಗೆರಾರಿನಲ್ಲಿ ಇದ್ದನು.


ಈ ಸಂಗತಿಯಿಂದ ಅಲ್ಲಿರುವ ಬಾವಿಗೆ ಲಹೈರೋಯಿ ಬಾವಿ ಎಂದು ಹೆಸರಾಯಿತು; ಅದು ಕಾದೇಶಿಗೂ ಬೆರೆದಿಗೂ ನಡುವೆ ಅದೆ.


ನಿಬ್ಷಾನ್, ಉಪ್ಪಿನಪಟ್ಟಣ, ಏಂಗೆದೀ ಎಂಬ ಆರು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಆಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ.


ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್‍ಬರ್ನೇಯಕ್ಕೆ ಸೇರಿದೆವು.


ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ; ಆದರೂ ನಾಶವೇ ಅವರ ಗತಿ.


ಮೊದಲನೆಯ ತಿಂಗಳಲ್ಲಿ ಇಸ್ರಾಯೇಲ್ಯರ ಸರ್ವಸಮೂಹದವರು ಚಿನ್ ಎಂಬ ಅರಣ್ಯಕ್ಕೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ವಿುರ್ಯಾಮಳು ತೀರಿಹೋದಳು; ಆಕೆಯ ಶವವನ್ನು ಸಮಾಧಿಮಾಡಿದರು.


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.


ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು.


ಕೋರಹಕುಲಪತಿ, ಗತಾಮಕುಲಪತಿ, ಅಮಾಲೇಕಕುಲಪತಿ ಇವರೇ. ಈ ಕುಲಪತಿಗಳು ಎದೋಮ್ಯರ ದೇಶದಲ್ಲಿ ಆದಾ ಎಂಬಾಕೆಯ ಸಂತತಿಯಲ್ಲಿ ಹುಟ್ಟಿದವರು.


ತಿಮ್ನ ಎಂಬವಳು ಏಸಾವನ ಮಗನಾದ ಏಲೀಫಜನಿಗೆ ಉಪಪತ್ನಿಯಾಗಿದ್ದು ಅವನಿಗೆ ಅಮಾಲೇಕನನ್ನು ಹೆತ್ತಳು ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಸಾಲಿನವರು.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿವಿುನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವವು.


ಗಾದಿನ ತೆಂಕಣ ಸರಹದ್ದಿನಲ್ಲಿ ದೇಶದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್‍ಕಾದೇಶಿನ ಹಳ್ಳವನ್ನು ದಾಟಿ [ಐಗುಪ್ತದ ಮುಂದಣ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು