ಆದಿಕಾಂಡ 15:13 - ಕನ್ನಡ ಸತ್ಯವೇದವು J.V. (BSI)13 ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. ಅಧ್ಯಾಯವನ್ನು ನೋಡಿ |