ಆದಿಕಾಂಡ 15:16 - ಕನ್ನಡ ಸತ್ಯವೇದವು J.V. (BSI)16 ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.