Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:2 - ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:2
21 ತಿಳಿವುಗಳ ಹೋಲಿಕೆ  

ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.


ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರುವಾಸಿಯನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತ ನಾಮವನ್ನು ಅನುಗ್ರಹಿಸುವೆನು.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು; ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವಾಸ್ತ್ಯವು; ಗರ್ಭಫಲವು ಆತನ ಬಹುಮಾನವೇ.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ತರುವಾಯ ಯೋಸೇಫನು ತನ್ನ ಮನೆವಾರ್ತೆಯವನಿಗೆ - ಆ ಮನುಷ್ಯರ ಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದ ಬಾಯಲ್ಲಿ


ಮನೇಬಾಗಲಲ್ಲಿದ್ದ ಮನೆವಾರ್ತೆಯವನ ಬಳಿಗೆ ಹೋಗಿ ಅವನಿಗೆ -


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ ದಣಿಯ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಗೆ ಬಂದು ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -


ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ತಿರಿಗಿ ಅಬ್ರಾಮನು - ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು ಎಂದು ಹೇಳಲು ಯೆಹೋವನು ಅವನ ಸಂಗಡ ಮಾತಾಡಿ -


ದಮಸ್ಕದ ವಿಷಯವಾದ ದೈವೋಕ್ತಿ. ಆಹಾ ದಮಸ್ಕವು ಇನ್ನು ಊರಾಗಿರದೆ ಹಾಳು ದಿಬ್ಬವಾಗುವದು.


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು