Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:3 - ಕನ್ನಡ ಸತ್ಯವೇದವು J.V. (BSI)

3 ತಿರಿಗಿ ಅಬ್ರಾಮನು - ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು ಎಂದು ಹೇಳಲು ಯೆಹೋವನು ಅವನ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ಅಬ್ರಾಮನು, “ನೀವು ನನಗೆ ಸಂತಾನವನ್ನು ಕೊಡಲಿಲ್ಲ. ನನ್ನ ಮನೆಯಲ್ಲಿರುವ ದಾಸನೇ ಉತ್ತರಾಧಿಕಾರಿಯಾಗಿರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:3
10 ತಿಳಿವುಗಳ ಹೋಲಿಕೆ  

ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಆಳನ್ನು ಚಿಕ್ಕತನದಿಂದ ಕೋಮಲವಾಗಿ ಸಾಕಿದರೆ ತರುವಾಯು ಅವನು ಎದುರುಬೀಳುವನು.


ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆನು; [ಇವರಿಂದ] ಹುಟ್ಟು ಗುಲಾಮರು ಉಂಟಾದರು; ಇದಲ್ಲದೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಲು ದನಕುರಿಗಳ ಧನವುಳ್ಳವನಾದೆನು;


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ:


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು